ಜಿ ರಾಮ್ಜಿ ವಿರುದ್ಧ ಕೈ ಹೋರಾಟಕೇಂದ್ರದ ನಡೆಗೆ ಕಾನೂನು ಸಮರ | | G-RAMG AGAINEST COGRESS PROTEST
ಕೇಂದ್ರದ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ವಿರೋಧಿಸಿ, ಮನರೇಗಾ ರದ್ಧತಿಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕರ್ನಾಟಕದಲ್ಲಿ ಹೋರಾಟ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಪೂರಕವೆಂಬಂತೆ ಸಚಿವ ಸಂಪುಟದಲ್ಲೂ ಸಹ ಚರ್ಚೆ ಮಾಡಲಾಗಿದೆ. ವಿಬಿ ಜಿ ರಾಮ್ ಜಿ ಕಾಯ್ದೆ ಬಗ್ಗೆ ಕೋರ್ಟ್ನಲ್ಲಿ ಪ್ರಶ್ನಿಸಲು ನಿರ್ಧಾರ ಮಾಡಿದೆ. ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಹೋರಾಟಕ್ಕೆ ಅಡ್ವೊಕೇಟ್ ಜನರಲ್ ಅಭಿಪ್ರಾಯ ಪಡೆದ ಕ್ಯಾಬಿನೆಟ್, ಕೋರ್ಟ್ನಲ್ಲಿ ಕಾನೂನು ಹೋರಾಟ, ಜನತಾ ನ್ಯಾಯಾಲಯದಲ್ಲಿ ರಾಜಕೀಯ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.
