Disappointment for B’luru Kohli fans | ಚಿನ್ನಸ್ವಾಮಿಯಲ್ಲಿ ಪಂದ್ಯ… ಕೊಹ್ಲಿ ಫ್ಯಾನ್ಸ್‌ಗೆ ಬೇಸರ..!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ದೆಹಲಿ ಮತ್ತು ಆಂಧ್ರಪ್ರದೇಶ ನಡುವೆ ಟೂರ್ನಿಯ ಪಂದ್ಯ ನಾಳೆ ನಡೆಯಲಿದೆ. ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಬ್ಯಾಟ್‌ ಹಿಡಿಯಲಿದ್ದು, ಪ್ರೇಕ್ಷಕರಿಗೊಂದು ಬ್ಯಾಡ್‌ ನ್ಯೂಸ್‌ ಇದೆ.

ವಿಜಯ್‌ ಹಜಾರೆ ದೆಹಲಿ ವರ್ಸಸ್‌ ಆಂಧ್ರಪ್ರದೇಶ ಪಂದ್ಯ ಬೆಂಗಳುರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 24 ರಂದು ನಡೆಯಲಿದೆ. ಆದರೆ ಮ್ಯಾಚ್‌ ವೀಕ್ಷಿಸಲು ಪ್ರೇಕ್ಷಕರಿಗೆ ಅವಕಾಶ ಇಲ್ಲ ಎನ್ನಲಾಗಿದ್ದು, ಕ್ರಿಕೆಟ್‌ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ದೆಹಲಿ ಮತ್ತು ಆಂಧ್ರಪ್ರದೇಶ ನಡುವೆ ಟೂರ್ನಿಯ ಮೊದಲ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದ್ದು, ಈ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಬ್ಯಾಟ್‌ ಹಿಡಿಯಲಿದ್ದಾರೆ. ದೆಹಲಿ ತಂಡದ ಪರ ವಿರಾಟ್‌ ಕೊಹ್ಲಿ ಆಡಲಿದ್ದಾರೆ. ಹಲಿ ತಂಡದಲ್ಲಿ ಆಡಲಿರುವ ವಿಚಾರ ತಿಳಿದು ಕೊಹ್ಲಿ ಅವರನ್ನು ನೋಡಲು ಪ್ರೇಕ್ಷಕರು ಉತ್ಸುಕರಾಗಿದ್ದರು.

ಆದರೆ ಭದ್ರತೆ, ಸುರಕ್ಷತೆ ವಿಚಾರವಾಗಿ ಪ್ರೇಕ್ಷಕರಿಗೆ ಸ್ಟೇಡಿಯಂ ಒಳಗೂ ಹೊರಗೂ ನಿರ್ಬಂಧ ವಿಧಿಸುವ ಸಾಧ್ಯತೆಯಿದೆ. ಪ್ರೇಕ್ಷಕರಿಗೆ ಅವಕಾಶ ಇಲ್ಲದೆ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥ ವೆಂಕಟೇಶ್‌ ಪ್ರಸಾದ್‌ ಈಗಾಗಲೇ ಗೃಹ ಸಚಿವ ಪರಮೇಶ್ವರ್‌ ಅವರಲ್ಲಿ ಮನವಿ ಮಾಡಿದ್ದಾರೆ. ಸರ್ಕಾರ ಇನ್ನೂ ಪಂದ್ಯ ಆಯೋಜಿಸಲು ಅನುಮತಿ ನೀಡಿಲ್ಲ. ಶೀಘ್ರವೇ ಈ ಬಗ್ಗೆ ಅಂತಿಮ ನಿರ್ಧಾರ ಪ್ರಕಟವಾಗುವ ಸಾಧ್ಯತೆಯಿದೆ.

ಆರ್‌ಸಿಬಿ ತಂಡ 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆದ ಹಿನ್ನಲೆ ತಂಡದ ಆಟಗಾರರು ಕಳೆದ ಜುಲೈನಲ್ಲಿ ಬೆಂಗಳೂರಿಗೆ ಬಂದಿದ್ದರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವ ನಡೆದಿತ್ತು. ಈ ಸಂಭ್ರಮಾಚರಣೆ ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು. ಇದರ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 11 ಮಂದಿ ಆರ್​ಸಿಬಿ ಅಭಿಮಾನಿಗಳು ಮೃತಪಟ್ಟಿದ್ದು, ಹಲವರು ಅಸ್ವಸ್ಥಗೊಂಡಿದ್ದರು.

RCB’s Chinnaswamy Stadium Kohli is ready to play

ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು. ಇದೇ ಕಾರಣದಿಂದ ಮಹಿಳಾ ವಿಶ್ವಕಪ್ ಪಂದ್ಯ ಕೂಡ ಕೈತಪ್ಪಿತ್ತು. ತಿಂಗಳಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದೇ ನಡೆಯುತ್ತದೆ ಎಂದು ಕ್ರಿಕೆಟ್‌ ಅಭಿಮಾನಿಗಳಿಗೆ ಭರವಸೆ ನೀಡಿದ್ದರು. ಜೊತೆಗೆ ಕೆಎಸ್ ಸಿಎ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಭಿಮಾನಿಗಳು ಐಪಿಎಲ್‌ ಚಿನ್ನಸ್ವಾಮಿಯಲ್ಲೇ ನಡೆಯುತ್ತೆ ಎಂದು ಆರ್‌ಸಿಬಿ ಫ್ಯಾನ್ಸ್‌ ಸಂತಸಗೊಂಡಿದ್ದರು. ಆದರೆ ಮ್ಯಾಚ್‌ ನಡೆದರೂ ನೋಡಲು ಅವಕಾಶ ಸಿಗುವುದು ಅನುಮಾನವಿದ್ದು, ಈಗ ಅಭಿಮಾನಿಗಳು ಬೇಸರಗೊಂಡಿದ್ದಾರೆ.  

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *