RCB’s Chinnaswamy Stadium Kohli is ready to play | ಬೆಂಗಳೂರಿನಲ್ಲೇ ಪಂದ್ಯ ಫಿಕ್ಸ್‌. ಕೊಹ್ಲಿ ಆಡಲು ಸಿದ್ಧ…!

RCB's Chinnaswamy Stadium Kohli is ready to play | ಬೆಂಗಳೂರಿನಲ್ಲೇ ಪಂದ್ಯ ಫಿಕ್ಸ್‌. ಕೊಹ್ಲಿ ಆಡಲು ಸಿದ್ಧ...!

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಬೇಕಿದ್ದ ವಿಜಯ್ ಹಜಾರೆ ಟೂರ್ನಿ ದೇವನಹಳ್ಳಿಗೆ ಶಿಫ್ಟ್​ ಆಗಿದ್ದು, ಕ್ರಿಕೆಟ್‌ ಪ್ರೇಮಿಗಳಿಗೆ ನಿರಾಸೆಯಾಗಿದೆ. ಅಷ್ಟಕ್ಕೂ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸ್ಥಳಾಂತರಿಸಲು ಕಾರಣ ಏನೇನು ಎಂಬುದನ್ನು ತಿಳಿಯೋಣ….     

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ನಡೆಯಬೇಕಿದ್ದ ವಿಜಯ್‌ ಹಜಾರೆ ಟೂರ್ನಿ ಕ್ಯಾನ್ಸಲ್‌ ಮಾಡಲಾಗಿದೆ. ಇದರಿಂದ ಅಭಿಮಾನಿಗಳು ಫುಲ್‌ ಫೀಲಿಂಗ್‌ನಲ್ಲಿದ್ದು, ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನಲೆ ಪಂದ್ಯ ನಡೆಸಲು ಬೆಂಗಳೂರು ಪೊಲೀಸರು ನಿರಾಕರಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ದೇವನಹಳ್ಳಿ ಬಳಿ‌ ಇರುವ ಬಿಸಿಸಿಐನ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನಕ್ಕೆ ಪಂದ್ಯವನ್ನ ಶಿಫ್ಟ್​ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಪಂದ್ಯ ನಡೆಸುವ ಭರವಸೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹೇಳಿದೆ.

ವಿರಾಟ್‌ ಕೊಹ್ಲಿ ಮೊದಲ ಬಾರಿಗೆ ಬೆಂಗಳೂರಿನ ಹೊರವಲಯದಲ್ಲಿ ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ. ವಿಜಯ್‌ ಹಜಾರೆ ಟೂರ್ನಿಯ ದೆಹಲಿ ಮತ್ತು ಆಂಧ್ರಪ್ರದೇಶ ನಡುವೆ ಪಂದ್ಯ ನಡೆಯಲಿದೆ. ಆದರೆ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲು ನಿರಾಕರಿಸುವುದಕ್ಕೆ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣ ಒಂದೇ ಎನ್ನಲು ಸಾಧ್ಯವಿಲ್ಲ. ಅದಷ್ಟೇ ಅಲ್ಲದೇ, ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಹಲವು ಲೋಪದೋಷಗಳಿವೆ. ಅವೆಲ್ಲಾ ಏನು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದಲ್ಲಿ 11 ಮಂದಿ RCB ಅಭಿಮಾನಿಗಳು ಮೃತಪಟ್ಟಿದ್ದರು. ಈ ಕಾಲ್ತುಳಿತ ದುರಂತ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಈ ತನಿಖೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ಲೋಪದೋಷಗಳು ಬಹಿರಂಗವಾಗಿದ್ದವು. ಅಲ್ಲದೆ ಕ್ರೀಡಾಂಗಣದ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಪ್ರಶ್ನೆಗಳೆದ್ದಿದ್ದವು. ಈ ದುರಂತದ ಬಳಿಕ ಬಿಸಿಸಿಐ ಬೆಂಗಳೂರಿನಲ್ಲಿ ಯಾವುದೇ ಅಂತರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸಿರಲಿಲ್ಲ.

ಬೆಂಗಳೂರಿನಲ್ಲಿ ಐಪಿಎಲ್ ಸೇರಿದಂತೆ ಭಾರತದ ಯಾವುದೇ ಮ್ಯಾಚ್‌ ನಡೆದರೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸೇರುತ್ತಾರೆ. ಚಿನ್ನಸ್ವಾಮಿ ‌ಕ್ರೀಡಾಂಗಣದಲ್ಲಿ ಕೇವಲ 32 ಸಾವಿರ ಆಸನಗಳಿವೆ. ಪ್ರತಿ ಬಾರಿ ಪಂದ್ಯಗಳು ಏರ್ಪಡಿಸಿದಾಗಲೂ ಲಕ್ಷಾಂತರ ಮಂದಿ ಕ್ರಿಕೆಟ್‌ ಅಭಿಮಾನಿಗಳು ಆಗಮಿಸುತ್ತಾರೆ. ಇದರಿಂದಾಗಿ ಸ್ಟೇಡಿಯಂನಲ್ಲಿ ನೂಕು ನುಗ್ಗಲು ಉಂಟಾಗುತ್ತದೆ. ಜನಸಂದಣಿಯಿಂದ ಕಾಲ್ತುಳಿತದಂತಹ ಘಟನೆಗಳು ನಡೆಯಲಿದ್ದು, ತಳ್ಳಿ ಹಾಕುವಂತಿಲ್ಲ. ಅಲ್ಲದೇ, ಕ್ರೀಡಾಂಗಣದಲ್ಲಿ ಪಾರ್ಕಿಂಗ್‌ ಸಮಸ್ಯೆ ಬಹಳ ಸಮಯದಿಂದ ಇದೆ.

ಇದಷ್ಟೇ ಅಲ್ಲದೇ, ಪಂದ್ಯ ನಡೆಯುವ ಸಮಯದಲ್ಲಿ ಸುತ್ತ-ಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ-ಮುತ್ತಲಿನ ರಸ್ತೆಗಳಲ್ಲಿ ಪ್ರಯಾಣಿಸಲು ಸಮಸ್ಯೆ ಆಗುತ್ತದೆ. ಕ್ರೀಡಾಂಗಣ ಇರುವ ಸ್ಥಳ ಸಾರ್ವಜನಿಕ ಸುರಕ್ಷತೆಗೆ ಅಪಾಯಕಾರಿಯಾಗಿದೆ. ಕ್ರೀಡಾಂಗಣದಲ್ಲಿ ಶೌಚಾಲಯ ವ್ಯವಸ್ಥೆ ಸರಿಯಾಗಿಲ್ಲ. ಅಗ್ನಿ ದುರಂತ ಸುರಕ್ಷತೆಯೂ ಸ್ಟೇಡಿಯಂನಲ್ಲಿ ಇಲ್ಲ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಸುವುದು ಕಷ್ಟಕರ. ಈ ಸಮಸ್ಯೆಗಳನ್ನೆಲ್ಲಾ ಬಗೆಹರಿಸಿದ ಬಳಿಕ ಪಂದ್ಯ ನಡೆಸುವುದೇ ಸೂಕ್ತ. ಒಟ್ನಲ್ಲಿ ಕ್ರಿಕೆಟ್‌ ಅಭಿಮಾನಿಗಳಿಗೆ ಇಂದು ಬೇಸರವಾಗಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕನಸು ಕೂಡ ಭಗ್ನವಾಗಿದೆ.

Related Video : Disappointment for B’luru Kohli fans | ಚಿನ್ನಸ್ವಾಮಿಯಲ್ಲಿ ಪಂದ್ಯ… ಕೊಹ್ಲಿ ಫ್ಯಾನ್ಸ್‌ಗೆ ಬೇಸರ….!

Leave a Reply

Your email address will not be published. Required fields are marked *